ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಗೆ ಉಡುಪಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಧಾನ ಪರಿಷತ್ ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಸವಿತಾ ಸಮಾಜದ ಮುಖಂಡರಾಗಿರುವಂತ ಕಿಶೋರ್ ಕುಮಾರ್ ಪುತ್ತೂರ್ ಅವರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು. ಈಗ ಇವರಿಗೆ ಬಿಜೆಪಿ ಹೈಕಮಾಂಡ್ ವಿಧಾನ ಪರಿಷತ್ ಟಿಕೆಟ್ ನೀಡಿದೆ.
ಕೋಟಾ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದಂತ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಕೋಟಾ ಶ್ರೀನಿವಾಸ ಪೂಜಾರಿಯವರು ಸಂಸದರಾಗಿ ಆಯ್ಕೆಯಾದ ನಂತ್ರ ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಒಂದು ಸ್ಥಾನಕ್ಕೆ ಈಗ ಉಪ ಚುನಾವಣೆ ಘೋಷಣೆಯಾಗಿತ್ತು.
ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಸೆ.26ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್.3 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್.4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್.7 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನಾಂಕವಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ