Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ತಿರುಪತಿ: ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ

Udupinews






ತಿರುಪತಿ: ಇಸ್ಕಾನ್ ದೇವಾಲಯಕ್ಕೆ ಬಾಂಬ್ ಬೆದರಿಕೆ 


ತಿರುಪತಿಯಲ್ಲಿರುವ ಇಸ್ಕಾನ್‌ ದೇವಸ್ಥಾನಕ್ಕೆ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ದೇವಾಲಯವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.

ಪಾಕಿಸ್ತಾನದ ಐಎಎಸ್‌‍ಐ ಜತೆ ನಂಟು ಹೊಂದಿರುವ ಭಯೋತ್ಪಾದಕರು ದೇವಾಲಯವನ್ನು ಸ್ಫೋಟಿಸಲಿದ್ದಾರೆ ಎಂದು ದೇಗುಲದ ಸಿಬ್ಬಂದಿಗೆ ಇ-ಮೇಲ್‌ ಸಂದೇಶ ಬಂದಿದೆ ಎಂದು ತಿಳಿದುಬಂದಿದೆ.

ಬೆದರಿಕೆ ಇ-ಮೇಲ್‌ ಬಂದ ಬೆನ್ನಲ್ಲೇ, ಬಾಂಬ್‌ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ತಂಡಗಳು ಸ್ಥಳಕ್ಕೆ ತಲುಪಿದ್ದು, ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿವೆ. ಆದರೆ, ದೇವಸ್ಥಾನದ ಆವರಣದಲ್ಲಿ ಸ್ಫೋಟಕ ಅಥವಾ ಇತರ ಯಾವುದೇ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿಲ್ಲ.

ತಿರುಪತಿ ವಿಮಾನ ನಿಲ್ದಾಣಕ್ಕೆ ಕೂಡ ಭಾನುವಾರ ಬಾಂಬ್‌ ಬೆದರಿಕೆ ಇಮೇಲ್‌ ಸಂದೇಶ ಬಂದಿತ್ತು. ಬೆದರಿಕೆ ಇ-ಮೇಲ್‌ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ಇಮೇಲ್‌ ಆಧರಿಸಿ ಅಧಿಕಾರಿಗಳು ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.

ತಿರುಪತಿಯಲ್ಲಿ ಸತತ ಬಾಂಬ್‌ ಬೆದರಿಕೆ ಸಂದೇಶಗಳಿಂದ ಭಕ್ತರು ಭಯಭೀತರಾಗಿದ್ದಾರೆ. ಇದರಿಂದ ಬೆದರಿಕೆ ಹಾಕುತ್ತಿದ್ದವರ ಪತ್ತೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo