ಸಿದ್ದಾಪುರ ಪೇಟೆಯ ಬಸ್ ನಿಲ್ದಾಣದಲ್ಲಿ ಅ.6ರಂದು ಪರಸ್ಪರ ಗಲಾಟೆ ಮಾಡುತ್ತಿದ್ದ ಮೂವರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.
ಶ್ರೀಕಾಂತ್, ವಿವೇಕ್, ಶೇಖರ ಎಂಬವರು ಅವಾಚ್ಯ ಶಬ್ಧಗಳಿಂದ ಬೈದು, ಕೈಯಿಂದ ದೂಡಾಡಿಕೊಂಡು ಗಲಾಟೆಯನ್ನು ಮಾಡಿ, ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡುತ್ತಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ