Slider


ಉಡುಪಿ: ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Udupinews



 ಶಂಕರನಾರಾಯಣ: ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ವ್ಯಕ್ತಿ ಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಶಂಕರನಾರಾಯಣ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಮೃತರನ್ನು ಶಂಕರನಾರಾಯಣ ಗ್ರಾಮದ ಶಿವರಾಮ(68) ಎಂದು ಗುರುತಿಸಲಾಗಿದೆ. ಇವರು ಸೆಪ್ಟೆಂಬರ್ 27ರಂದು ಶಂಕರನಾರಾಯಣ ಗ್ರಾಮದ ತೌಡ ಕಲ್ಲು ಎಂಬಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ವಿಷದ ಹಾವು ಕಚ್ಚಿದ್ದು, ತೀವ್ರವಾಗಿ ಅಸ್ವಸ್ಥ ಗೊಂಡಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo