ಕಾಂಗ್ರೆಸ್ ಸರ್ಕಾರ ಉರುಳಿಸಲು ಬಿಜೆಪಿಯಿಂದ ಶಾಸಕರಿಗೆ 50ಕೋಟಿ ಆಮಿಷ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ
ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿಯವರು ನಮ್ಮ 50 ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್ 50 ಶಾಸಕರಿಗೆ ತಲ 50 ಕೋಟಿ ರೂಪಾಯಿ ಆಫರ್ ನೀಡಿದ್ದರು, ಆದರೆ ನಮ್ಮ ಶಾಸಕರು ಯಾವುದಕ್ಕೂ ಬಗ್ಗಲಿಲ್ಲ. ಹೀಗಾಗಿ ಬಿಜೆಪಿ ಅವರ ಪ್ಲಾನ್ ಫ್ಲಾಪ್ ಆಗಿದೆ ಎಂದು ಹೇಳಿದರು.
ಬಿಜೆಪಿಯವರ ನನ್ನ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ, ನನ್ನನ್ನೂ ಕಂಡರೆ ಅವರಿಗೆ ಹೊಟ್ಟೆ ಉರಿ, ಬಡವರ ಪರ ಕೆಲಸ ಮಾಡುತ್ತೇನೆ ಅಂತ ನನ್ನನ್ನು ಇಳಿಸಲು ಪ್ರಯತ್ನಿಸುತ್ತಿದ್ದಾರೆ. ಕಳೆದ 40 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ನನ್ನನ್ನು ಮುಟ್ಟಿದರೆ ಕರ್ನಾಟಕ ಜನ ಸುಮ್ಮನೆ ಬಿಡಲ್ಲ ಎಂದು ಅವರಿಗೆ ಗೊತ್ತಿಲ್ಲ ಎಂದು ಎಚ್ಚರಿಕೆ ನೀಡಿದರು.
ನನ್ನ ವಿರುದ್ಧ ಮುಡಾ ಕೇಸ್ ಗಳನ್ನು ಹಾಕಿ ಅಧಿಕಾರದಿಂದ ಕೆಳಗಿಳಿಸಲು ಯೋಚಿಸುತ್ತಿದ್ದಾರೆ. ಅಲ್ಲದೇ ಜನರು ಮೂರ್ಖರು ಅಂತ ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಜನರ ಬೆಂಬಲ ಇರುವವರೆಗೆ ಯಾವ ಕೇಸ್ಗು ಜಗ್ಗಲ್ಲ ಬಗ್ಗಲ್ಲ ಬಿಜೆಪಿಯವರು ಚರ್ಚೆಗೆ ಬರಲಿ ನಮ್ಮ ತಪ್ಪು ಏನೆಂದು ತೋರಿಸಲಿ ನೀವೆಲ್ಲರೂ ನನ್ನ ಜೊತೆ ನಿಲ್ಲಬೇಕು ಎಂದು ಸಿಎಂ ಹೇಳಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ