ಮಣಿಪಾಲ: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ರಿಕ್ಷಾ ಪಲ್ಟಿ: ಮೂವರು ವಿದ್ಯಾರ್ಥಿಗಳಿಗೆ ಗಾಯ
ಮಣಿಪಾಲ : ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ.
ಮಣಿಪಾಲ ಮಾಧವ ಕೃಪಾ ಶಾಲೆಯ ಮಕ್ಕಳನ್ನು ಸಂಜೆ ಮನೆಗೆ ಕರೆ ತರುತ್ತಿದ್ದ ವೇಳೆ ಮಣಿಪಾಲದಿಂದ ಪರ್ಕಳದ ಕಡೆ ಹೋಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಿಕ್ಷಾದಲ್ಲಿದ್ದ ಮೂವರು ಮಕ್ಕಳಿಗೆ ಗಾಯಗಳಾಗಿದೆ ಎನ್ನಲಾಗುತ್ತಿದೆ.
ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆಟೋ ರಿಕ್ಷಾದಲ್ಲಿ ಒಟ್ಟು 8 ಮಂದಿ ವಿದ್ಯಾರ್ಥಿಗಳು ಇದ್ದರು ಎಂಬ ಮಾಹಿತಿಯಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ