ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿದ್ದು ನವೆಂಬರ್ 23ರಂದು ಫಲಿತಾಂಶ ಪ್ರಕಟಗೊಳ್ಳಬೇಕಿದೆ. ಈ ನಡುವೆ ಇಂದು ಚುನಾವಣೋತ್ತರ ಸಮೀಕ್ಷೆಯ ವರದಿಗಳು ಹೊರಬಿದ್ದಿವೆ.
ಸಂಡೂರು ಶಿಗ್ಗಾವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಎಕ್ಸಿಟ್ ಪೋಲ್ ವರದಿಯನ್ನು ಪಿ ಮಾರ್ಕ್ ಸಂಸ್ಥೆ ಪ್ರಕಟಿಸಿದೆ.
ಈ ಪ್ರಕಾರ ರಾಜ್ಯದಲ್ಲಿ ಮೂರು ಕ್ಷೇತ್ರಗಳ ಪೈಕಿ, ಆಡಳಿತರೂಢ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆದ್ದರೆ ಎನ್.ಡಿ.ಎ ಮೈತ್ರಿ ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎನ್ನಲಾಗಿದೆ.
ಪಿ ಮಾರ್ಕ್ ಸಂಸ್ಥೆಯ ಎಕ್ಸಿಟ್ ಪೋಲ್ ವರದಿಯ ಪ್ರಕಾರ ಬಳ್ಳಾರಿಯ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯ ಸಾಧಿಸಲಿದೆ ಇನ್ನುಳಿದಂತೆ ಹಾವೇರಿಯ ಶಿಗ್ಗಾವಿಯಲ್ಲಿ ಬಿಜೆಪಿ ಗೆಲುವಿನ ಬಾವುಟ ಹಾರಿಸಲಿದ್ದು ತೀವ್ರ ಹಣಹಣಿಗೆ ಸಾಕ್ಷಿಯಾಗಿದ್ದ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲ್ಲಲಿದ್ದಾರೆ ಎಂಬ ವರದಿಯನ್ನು ಈ ಸಂಸ್ಥೆ ಪ್ರಕಟಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಅಂತಿಮವಾಗಿ ನವೆಂಬರ್ 23ರಂದು ಫಲಿತಾಂಶ ಪ್ರಕಟಗೊಳ್ಳಬೇಕಿದ್ದು ಮತದಾರ ಯಾರಿಗೆ ಜೈ ಎಂದಿದ್ದಾನೆ ಎಂಬುದನ್ನು ಕಾದು ನೋಡಬೇಕಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ