Slider


22ಲಕ್ಷ ಬಿಪಿಎಲ್ ಕಾರ್ಡ್ ರದ್ದು: ಪಡಿತರ ಚೀಟಿದಾರರಿಗೆ ಆತಂಕ

Udupi









 22ಲಕ್ಷ ಬಿಪಿಎಲ್ ಕಾರ್ಡ್ ರದ್ದು: ಪಡಿತರ ಚೀಟಿದಾರರಿಗೆ ಆತಂಕ 


ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರ ಬಹಳಷ್ಟು ಗೊಂದಲವನ್ನು ಉಂಟು ಮಾಡಿದ್ದು, ಇದೀಗ 22 ಲಕ್ಷ ಬಿಪಿಎಲ್ ಕಾರ್ಡ್ ಅನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದಾಗಿ ಬಿಪಿಎಲ್ ಕಾರ್ಡ್ ಹೊಂದಿರುವ ಅರ್ಹ ಕಾರ್ಡುದಾರರು ಸಹ ಆತಂಕಗೊಂಡಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ನೌಕರರು ಸೇರಿದಂತೆ 1.20 ಲಕ್ಷ ಆದಾಯವಿರುವವರು ಕೂಡ ಬಿಪಿಎಲ್ ಕಾರ್ಡ್ ನಲ್ಲಿ ಸೇರಿಸಲಾಗಿದೆ. ಇದರಿಂದಾಗಿ ಬಡ ಕುಟುಂಬದವರಿಗೆ ಸಿಗಬೇಕಾದ ಅಗತ್ಯ ವಸ್ತುಗಳು ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಬರೋಬ್ಬರಿ 22,62,482 ದಷ್ಟು ಬಿಪಿಎಲ್ ಕಾರ್ಡ್ ಅನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲು ಸರ್ಕಾರ ನಿರ್ಧರಿಸಿದೆ. 

ಅನರ್ಹಗೊಳಿಸಲು ಇರುವ 22 ಲಕ್ಷ ಬಿಪಿಎಲ್ ಕಾರ್ಡ್ ಗಳ ಪೈಕಿ 1,06,125 ಆದಾಯ ತೆರಿಗೆ ಪಾವತಿದಾರರ ಬಿಪಿಎಲ್ ಕಾರ್ಡ್ ಹೊಂದಿದ್ದರೆ, 1.20 ಲಕ್ಷ ಆದಾಯವಿರುವ 10,54,368 ದಷ್ಟು ಬಿಪಿಎಲ್ ಕಾರ್ಡ್ ಇದೆ. ಅಲ್ಲದೇ 4, 272 ದಷ್ಟು ಕಾರ್ಡ್ ಗಳು ಸರ್ಕಾರಿ ನೌಕರರ ಹೆಸರಿನಲ್ಲಿದೆ. 

ಸದ್ಯ 22 ಲಕ್ಷ ಬಿಪಿಎಲ್ ಕಾರ್ಡ್ ಗಳ ಪೈಕಿ 10,97,621 ದಷ್ಟು ಕಾರ್ಡ್ ಅನರ್ಹವಾಗಿದ್ದು, ಉಳಿದ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.












0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo