ಉಡುಪಿ: ನಗರದ ಆದಿಉಡುಪಿ ಎಪಿಎಂಸಿ ಮಾರ್ಕೆಟ್‌ನ ಕಟ್ಟೆಯ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಅಂದರ್ ಬಾಹರ್ ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಳೆ ಜುಗಾರಿ ಆಟವಾಡುತ್ತಿದ್ದ 4 ಮಂದಿ ಸ್ಥಳದಿಂದ ಪರಾರಿಯಾಗಿದ್ದು, ಅವರನ್ನು ರಮೇಶ, ಸಿದ್ದನಗೌಡ, ಸೋಮ, ಬಸವ ಎಂದು ಗುರುತಿಸಲಾಗಿದೆ.
ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ನಗದು 740 ರೂ. ಹಾಗೂ ಇಸ್ಪೀಟು ಎಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ