ಕುಂದಾಪುರ: ಇನ್ನೋವಾ ಕಾರಿಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ(ನ.20) ಮಧ್ಯಾಹ್ನ ಸಂಭವಿಸಿದೆ.
ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕೊಲ್ಲೂರು ದೇವರ ದರ್ಶನ ಮುಗಿಸಿ ಕೇರಳ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ಹೆದ್ದಾರಿಯಲ್ಲಿ ವಾಹನ ನಿಧಾನ ಮಾಡಿದ ಪರಿಣಾಮ ಹಿಂಬದಿಯಿಂದ ವೇಗವಾಗಿ ಬಂದ ಮೀನಿನ ಲಾರಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ, ಪರಿಣಾಮ ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು ಅವರನ್ನು ಕೋಟೇಶ್ವರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ.
ಕಾರಿನಲ್ಲಿದ್ದವರು ಕೇರಳ ಮೂಲದವರು ಎನ್ನಲಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿದೆ.
ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ