ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾದ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ ರಾಜಕೀಯದವರು ಮಾಡುತ್ತಿರುವುದು ಎಲ್ಲಾ ಓಟಿಗೋಸ್ಕರ. ಹೀಗಾಗಿ ನಮ್ಮ ದೇಶದಲ್ಲಿ ಮುಸ್ಲಿಮರಿಗೆ ಓಟಿನ ಹಕ್ಕು ಇಲ್ಲದಂತೆ ಕಾನೂನು ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದರು.
ವಕ್ಫ್ ಕಾಯ್ದೆ ವಿರೋಧಿಸಿ, ರೈತರು, ದಲಿತರು, ಶೋಷಿತರ ಭೂಮಿ ಉಳಿಸಲು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಯಾರದೋ ವಸ್ತುವನ್ನು ಯಾರೋ ಕಿತ್ತುಕೊಳ್ಳುವುದು ಧರ್ಮವಲ್ಲ. ಹೀಗಾಗಿ ಎಲ್ಲರೂ ಹೋರಾಟ ಮಾಡಿ ರೈತರ ಜಮೀನುಗಳನ್ನು ಉಳಿಸಬೇಕು. ಪ್ರಪಂಚದಲ್ಲಿ ಇರುವ ಎಲ್ಲ ಜನರಿಗೆ ಅನ್ನ ನೀಡುವ ಕೆಲಸ ಮಾಡುತ್ತಿರುವುದು ರೈತ. ಆದ್ದರಿಂದ ರೈತನಿಗೆ ಬೆಂಬಲವಾಗಿ ನಿಲ್ಲಬೇಕು. ಯಾವ ಕಾನೂನೂ ಇಲ್ಲದೇ ಹೇಗೆ ರೈತರ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಳ್ಳುತ್ತದೆ ಎಂದು ಪ್ರಶ್ನಿಸಿದರು.
ಇನ್ನು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಆಗ, ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಆಗಲಿದೆ ಎಂದು ಹೇಳಿದರು.
ಲೆ ಬೆವರ್ಸಿ ನೀನಲ್ಲ ನಿನ್ನ ಅಪ್ಪ ನೆನೆಸಿದರೂ ಸಾದ್ಯವಿಲ್ಲ
ಪ್ರತ್ಯುತ್ತರಅಳಿಸಿ