ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ ನಾಳೆಯಿಂದ ಮೊದಲುಗೊಂಡು ನವೆಂಬರ್ 30ರವರೆಗೆ ನಡೆಯಲಿದೆ.
ಲಕ್ಷದೀಪೋತ್ಸವದ ಅಂಗವಾಗಿ ನವೆಂಬರ್ 26ರಂದು, ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರು ಕಟ್ಟೆ ಉತ್ಸವ ಹಾಗೂ 30ರಂದು, ಗೌರಿ ಮಾರುಕಟ್ಟೆ ಉತ್ಸವ ದೀಪೋತ್ಸವ ನಡೆಯಲಿದೆ.
ಲಕ್ಷದೀಪೋತ್ಸವದ ಪ್ರಯುಕ್ತ, ನ.29ರಂದು 92ನೇ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಅಂದು ಸಂಜೆ 5ಗಂಟೆಗೆ ಗೃಹಸಚಿವ ಜಿ.ಪರಮೇಶ್ವರ್ ಸರ್ವಧರ್ಮ ಸಮ್ಮೇಳನದ ಅಧಿವೇಶನವನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರು ರಾಜರಾಜೇಶ್ವರಿ ನಗರದದ ಕೈಲಾಸ ಆಶ್ರಮ ಮಹಾಸಂಸ್ಥಾನದ ಶ್ರೀ ಜಯೇಂದ್ರ ಪುರಿ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ. ನ.30ರಂದು ಸಂಜೆ 5ಗಂಟೆಗೆ ಸಾಹಿತ್ಯ ಸಮ್ಮೇಳನವನ್ನು ಬಹುಶ್ರುತ ವಿದ್ವಾಂಸ ಶತಾವಧಾನಿ ಡಾ.ಆರ್.ಗಣೇಶ್ ಅವರು ಉದ್ಘಾಟಿಸಲಿದ್ದಾರೆ. ಲೇಖಕ, ಸಂಶೋಧಕ ಡಾ.ಪಾದೆಕಲ್ಲು ವಿಷ್ಣು ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ