Slider

ಬ್ರಹ್ಮಾವರ: ಲಾಕಪ್ ಡೆತ್ ಪ್ರಕರಣ: ಎಸ್.ಐ ಸಹಿತ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

Udupinews

 





ಬ್ರಹ್ಮಾವರ: ಲಾಕಪ್ ಡೆತ್ ಪ್ರಕರಣ: ಎಸ್.ಐ ಸಹಿತ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು 

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು(45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್‌ಕಾನ್‌ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ. 










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo