ಕಾಂತಾರ ಚಾಪ್ಟರ್ 1 ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು ಸಮೀಪ ಜಡ್ಕಳ್ ಬಳಿ ಪಲ್ಟಿಯಾಗಿದೆ. ಬಸ್ ನಲ್ಲಿ ಹಲವು ಮಂದಿ ಇದ್ದರು. 6 ಜನರಿಗೆ ಗಂಭೀರ ಪೆಟ್ಟಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರಾವಳಿ ಭಾಗದ ವಿವಿಧೆಡೆ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ 'ಕಾಂತಾರ ಚಾಪ್ಟರ್ 1' ಚಿತ್ರೀಕರಣ ನಡೆಸಲಾಗುತ್ತಿದೆ. ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ತೆರಳುವಾಗ ಮಿನಿ ಬಸ್ ಪಲ್ಟಿಯಾಗಿದೆ. ಇದರಲ್ಲಿ 20 ಜೂನಿಯರ್ ಕಲಾವಿದರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ