ದುರ್ಗಾಂಬಾ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ
ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ.
ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತ್ತಿದ್ದ ದುರ್ಗಾಂಬ ಬಸ್ ಹೊಸನಗರದಿಂದ ಬರುತ್ತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತ್ತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು 15 ಜನರು ಗಾಯಗೊಂಡಿದ್ದಾರೆ ಎನ್ನಲಾಗುತಿದ್ದು, ಗಾಯಾಳುಗಳನ್ನು ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಂಬುಲೆನ್ಸ್ ಗೆ ಸ್ಥಳೀಯರು ಕರೆ ಮಾಡಿದ್ದು ತುಂಬಾ ಸಮಯವಾದರೂ ಆಂಬುಲೆನ್ಸ್ ಬರಲಿಲ್ಲ. ಈ ವೇಳೆ ಸ್ಥಳಕ್ಕೆ ಆಗಮಿಸಿದ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ಗಾಯಾಳುಗಳನ್ನು ಪೊಲೀಸ್ ಜೀಪ್ ನಲ್ಲಿಯೇ ಕರೆದೊಯ್ಯುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ