ಹೆಬ್ರಿ: ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಪೀತುಬೈಲ್ ಎಂಬಲ್ಲಿ ನಡೆದ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣದ ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಶುಕ್ರವಾರ (ನ.22) ನಡೆದಿದೆ.
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಶುಕ್ರವಾರ ಬೆಳಗ್ಗೆ ಹೆಬ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಆತನನ್ನು ವಶಪಡಿಸಿಕೊಂಡು ಹೆಬ್ರಿ ಠಾಣೆಗೆ ಕರೆ ತಂದಿದ್ದಾರೆ. ಈ ಬಗ್ಗೆ ಆತ ಅಮಾಯಕ ಆತನಿಗೆ ಏನು ತಿಳಿದಿಲ್ಲ ಅಂತವನನ್ನು ಯಾಕೆ ಠಾಣೆಗೆ ಕರೆದುಕೊಂಡು ಬಂದಿದ್ದೀರಿ ಅಲ್ಲಿಯ ವಿಚಾರಿಸಬಹುದಿತ್ತಲ್ಲ ಎಂದು ಮಲೆಕುಡಿಯ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಠಾಣಾಧಿಕಾರಿ ಅವರಲ್ಲಿ ಮನವಿ ಮಾಡಿ ಆತನನ್ನು ಕೂಡಲೇ ಬಿಡುವಂತೆ ಒತ್ತಾಯಿಸಿದರು.
ವಿಚಾರಣೆಯ ನಂತರ ಜಯಂತ್ ಗೌಡ ಅವರನ್ನು ಬಿಡುಗಡೆಗೊಳಿಸಿರುವ ಮಾಹಿತಿ ಲಭ್ಯವಾಗಿದೆ.
ಸಮಾಜದ ಪ್ರಮುಖರಾದ ಶ್ರೀಧರ್ ಗೌಡ, ಗಂಗಾಧರ ಗೌಡ, ನಾಡ್ಪಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಕುಮಾರ್, ಹೆಬ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ತಾರಾನಾಥ್ ಬಂಗೇರ, ಊರಿನ ಪ್ರಮುಖರಾದ ವಿಜಯ ಶೆಟ್ಟಿ ಮೊದಲಾದವರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ