ಕಾರ್ಕಳ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಬಿಲ್ಲವ ಸಂಘದ ಅಧ್ಯಕ್ಷ ಡಿ. ಆರ್. ರಾಜು ನಿಧನ
ಕಾರ್ಕಳ: ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆರ್. ರಾಜು ಪೂಜಾರಿ (64) ಹೃದಯಾಘಾತಕ್ಕೆ ಒಳಗಾಗಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ.
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲ್ಲೆಯಲ್ಲಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದಕೀಯ ಪರೀಕ್ಷೆಯಿಂದ ಅವರು ಮೃತಪಟ್ಟಿರುವುದು ದೃಢ ಪಟ್ಟಿದೆ ಎನ್ನಲಾಗಿದೆ.
ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು. ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಭಾನುವಾರ ಬೆಳಿಗ್ಗೆನಿಂದಲೇ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ