ಕಾರ್ಕಳ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯ ವಶ
ಉಡುಪಿ: ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ವಶಕ್ಕೆ ಪಡೆದಿದ್ದಾರೆ.
ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅವಿನಾಶ್ ಮಲ್ಲಿ ಎಂಬವರಿಗೆ ಸಂಬಂಧಿಸಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಉಡುಪಿ ಅಬಕಾರಿ ಇಲಾಖೆಯ ಅಧಿಕಾರಿಗಳು ಸುಮಾರು 250ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ವಶಕ್ಕೆ ಪಡೆದ ಮದ್ಯದ ಮೌಲ್ಯ ಲಕ್ಷಾಂತರ ರೂಪಾಯಿ ಆಗಿರುತ್ತದೆ.
ಆರೋಪಿಗಳು ಗೋವಾದಿಂದ ಕಡಿಮೆ ಬೆಲೆಗೆ ಮದ್ಯವನ್ನು ತರಿಸಿಕೊಂಡು ಮನೆಯಲ್ಲಿಯೇ ಸಂಗ್ರಹಿಸಿಟ್ಟುಕೊಂಡು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು ಮನೆಯನ್ನು ಶೋಧಿಸಿದಾಗ ಅಕ್ರಮ ಮದ್ಯದ ಬಾಟಲ್ಗಳು ಇರುವುದು ತಿಳಿದುಬಂದಿದೆ. ವಶಪಡಿಸಿಕೊಂಡ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ