Slider

ಉಡುಪಿ: ನ.15ರಿಂದ ರಾಷ್ಟ್ರೀಯ ನವಜಾತ ಶಿಶು ಸಪ್ತಾಹ

Udupinews

 






ಉಡುಪಿ: ನ.15ರಿಂದ ರಾಷ್ಟ್ರೀಯ ನವಜಾತ ಶಿಶು ಸಪ್ತಾಹ 


ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾಸ್ಪತ್ರೆಯ ರಾಷ್ಟ್ರೀಯ ಆರೋಗ್ಯ ಅಭಿಯಾನಗಳ ಸಂಯುಕ್ತ ಆಶ್ರಯದಲ್ಲಿ ನ್ಯೂಮೋನಿಯಾವನ್ನು ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಹಾಗೂ ಕ್ರಿಯಾ ಅಭಿಯಾನ ಮತ್ತು ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನ.15ರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಜೋತ್ಸ್ನಾ ಬಿ.ಕೆ., ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜಗೋಪಾಲ್ ಭಂಡಾರಿ ಮತ್ತಿತರರು ಭಾಗವಹಿಸಲಿದ್ದಾರೆ. 

ಸಂಪನ್ಮೂಲ ವ್ಯಕ್ತಿಗಳಾಗಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ವೇಣುಗೋಪಾಲ್ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಮಹಾದೇವ ಭಟ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.











0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo