Slider


ಉಡುಪಿ: ನ.21ರಂದು ಲೋಕಾಯುಕ್ತ ಸಾರ್ವಜನಿಕ ಅಹವಾಲು- ಜನ ಸಂಪರ್ಕ ಸಭೆ

Udupinews

 






ಉಡುಪಿ: ನ.21ರಂದು ಲೋಕಾಯುಕ್ತ ಸಾರ್ವಜನಿಕ ಅಹವಾಲು- ಜನ ಸಂಪರ್ಕ ಸಭೆ


ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ನವೆಂಬರ್ 21 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕುಂದಾಪುರ ತಾಲೂಕು ಕಛೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo