ತಿರುಪತಿ ದೇಗುಲದಿಂದ ಹಿಂದೂಯೇತರ ಸಿಬ್ಬಂದಿಗೆ ಗೇಟ್‌ಪಾಸ್..!
ತಿರುಪತಿ ದೇವಸ್ಥಾನದ ಆಡಳಿತದಿಂದ ಹಿಂದೂಯೇತರರು ಸ್ವಯಂ ನಿವೃತ್ತಿ ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆಯನ್ನು ಆರಿಸಿಕೊಳ್ಳಬೇಕೆಂದು ಎಂದು ತಿರುಮಲ ತಿರುಪತಿ ದೇವಸ್ಥಾನಂ (TTD) ನಿರ್ಧರಿಸಿದೆ.
ತಿರುಮಲ ತಿರುಪತಿ ದೇವಸ್ಥಾನಗಳು (TTD) ನ.18 ರಂದು ಸಭೆ ನಡೆಸಿದ್ದು, ಈ ವೇಳೆ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹಿಂದೂಯೇತರ ಉದ್ಯೋಗಿಗಳ ನಿಖರ ಸಂಖ್ಯೆಯನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ. ಮಂಡಳಿಯ 7 ಸಾವಿರ ಖಾಯಂ ಉದ್ಯೋಗಿಗಳ ಪೈಕಿ ಸುಮಾರು 300 ಮಂದಿಗೆ ಈ ಕ್ರಮವು ಪರಿಣಾಮ ಬೀರಲಿದೆ ಎಂದು ಮೂಲಗಳು ತಿಳಿಸಿವೆ. ಟಿಟಿಡಿಯು ಸುಮಾರು 14,000 ಗುತ್ತಿಗೆ ಕಾರ್ಮಿಕರನ್ನು ಸಹ ನೇಮಿಸಿಕೊಂಡಿದೆ.
ಈ ಹಿಂದೆ ಅಕ್ಟೋಬರ್ 31 ರಂದು ಟಿಟಿಡಿ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಬಿಆರ್ ನಾಯ್ಡು ಅವರು ದೇವಸ್ಥಾನವನ್ನು ಹಿಂದೂಗಳು ಮಾತ್ರ ನಡೆಸಬೇಕು ಎಂದು ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು. ಇದೀಗ ಟಿಟಿಡಿ ವಿವಿಧ ನೌಕರರ ಸಂಘಗಳಿಂದ ಬೆಂಬಲವನ್ನು ಪಡೆದುಕೊಂಡಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ