ಇತ್ತೀಚಿನ ದಿನಗಳಲ್ಲಿ ಕೋರ್ಟ್ ಕೂಡಾ ಬಿಜೆಪಿ ಹೇಳಿದಂತೆ ಕೇಳುವ ಪರಿಸ್ಥಿತಿ ಬಂದಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತೀಂದ್ರ, ಕೋರ್ಟ್‌ಗಳು ಕೂಡಾ ಕೇಂದ್ರ ಸರ್ಕಾರದ ಮಾತು ಕೇಳುವ ಪರಿಸ್ಥಿತಿ ಬಂದಿದೆ.
ನಾವು ತಪ್ಪು ಮಾಡಿಲ್ಲ, ನಮಗೆ ತನಿಖೆಯ ಯಾವುದೇ ಭಯವಿಲ್ಲ. ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದೆ ಎಂದು ಹೇಳಿದರು.
ಯತೀಂದ್ರ ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ನ್ಯಾಯಾಂಗವನ್ನು ಅವಮಾನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ