Slider


ಫೆಂಗಲ್ ಚಂಡಮಾರುತ ಪ್ರಭಾವ: ಕರಾವಳಿಯಲ್ಲಿ ಡಿ.1ರಿಂದ ಮಳೆ ಸಾಧ್ಯತೆ

Udupi


 ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಪೆಂಗಾಲ್ ಚಂಡಮಾರುತದಿಂದಾಗಿ ರಾಜ್ಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಪೆಂಗಾಲ್ ಚಂಡಮಾರುತ ತಮಿಳುನಾಡಿನತ್ತ ಸಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.
CLICK HERE SHOP NOW

ಇದೇ ಚಂಡಮಾರುತ ಪರಿಣಾಮ ರಾಜ್ಯದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 1 ರಿಂದ ಕರಾವಳಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ, ನವೆಂಬರ್‌ 30 & ಡಿಸೆಂಬರ್‌ 1 ರಂದು ಅಲ್ಲಲ್ಲಿ ಚದುರಿದಂತೆ ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.

ಕರಾವಳಿಯಲ್ಲೂ ಡಿಸೆಂಬರ್ 1 ಮತ್ತು 2 ರಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಡಿಸೆಂಬರ್ 1ರವರೆಗೆ ಅಂದರೆ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಲಘು ಇಲ್ಲವೇ ಹಗುರ ಮಳೆ ಬರಬಹುದು ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo