Slider


ಉಡುಪಿ: ವಿವಾಹ ನಿಶ್ಚಿತಾರ್ಥ ನಡೆದಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

Udupifirst


ಉಡುಪಿ: ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.

ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ. 

ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನ. 17ರಂದು ಕೊನೆಯುಸಿರೆಳೆದಿದ್ದಾರೆ. ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo