Slider

ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಆರೋಪ: ಉಡುಪಿ ಖಜಾನೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Udupinews

 






ಉಡುಪಿ: ಲಂಚ ಸ್ವೀಕರಿಸುತ್ತಿದ್ದ ಆರೋಪ: ಉಡುಪಿ ಖಜಾನೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ 


ಉಡುಪಿ: ನಿವೃತ್ತ ಶಿಕ್ಷಕರೊಬ್ಬರಿಗೆ ಪಿಂಚಣಿ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ ಉಪನಿರ್ದೇಶಕ ಹಾಗೂ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ ಎಂಬವರು ತಮ್ಮ ಪಿಂಚಣಿ ಹಣವನ್ನು ಪಡೆಯಲು ಕಳೆದ 5 ತಿಂಗಳಿನಿಂದ ಖಜಾನೆಯ ಉಪನಿರ್ದೇಶಕ ರವಿ ಕುಮಾರ್ ಮತ್ತು ಸಹಾಯಕ ರಾಘವೇಂದ್ರ ಎಂಬವರು ಸತಾಯಿಸುತ್ತಿದ್ದು 5000 ರೂ. ಲಂಚ ನೀಡುವಂತೆ ಒತ್ತಾಯಿಸಿದ್ದರೆಂದು ದೂರಲಾಗಿದೆ. 

ಈ ಬಗ್ಗೆ ಹಿತೇಂದ್ರ ಭಂಡಾರಿಯವರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ಅದರಂತೆ ಉಡುಪಿ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ಹಾಗೂ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಸುರೇಶ್ ಹಾಗೂ ಕೆ.ಎನ್.ಚಂದ್ರಶೇಖರ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ರವಿಕುಮಾರ್ ಮತ್ತು ರಾಘವೇಂದ್ರನನ್ನು ವಶಕ್ಕೆ ಪಡೆದುಕೊಂಡಿತು. 

ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ನಾಗರಾಜ, ಸತೀಶ್, ಪ್ರಸನ್ನ, ರಮೇಶ್, ಸೂರಜ್, ಸುಧೀರ್, ರಾಘವೇಂದ್ರ, ಪುಷ್ಪಲತಾ, ಮಲ್ಲಿಕಾ ಭಾಗವಹಿಸಿದ್ದರು.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo