Slider


ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ತುಷ್ಟೀಕರಣ ಮತ್ತು ಓಲೈಕೆ ನೀತಿಯಿಂದ ವಕ್ಪ್ ಕಾನೂನು ರೂಪಿಸಿದ ಕಾಂಗ್ರೆಸ್: ಪ್ರಧಾನಿ ನರೇಂದ್ರ ಮೋದಿ

Udupi



ಸಂವಿಧಾನದಲ್ಲಿ ಅವಕಾಶ ಇಲ್ಲದಿದ್ದರೂ ತುಷ್ಟೀಕರಣ ಮತ್ತು ಓಲೈಕೆ ನೀತಿಯಿಂದ ವಕ್ಪ್ ಕಾನೂನು ರೂಪಿಸಿರುವ ಕಾಂಗ್ರೆಸ್ ನೈಜ ಜಾತ್ಯತೀತತೆಯನ್ನು ನೇಣುಗಂಬಕ್ಕೆ ಏರಿಸಲು ಹೊರಟಿದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಗೆಲುವಿನ ಹಿನ್ನಲೆಯಲ್ಲಿ ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, 2014ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನೇ ಧಿಕ್ಕರಿಸಿ ಕಾನೂನಿಗೆ ತಿದ್ದುಪಡಿ ಮಾಡಲಾಗಿದೆ. ದೆಹಲಿಯಲ್ಲಿ ಅನೇಕ ಆಸ್ತಿಗಳನ್ನು ವಕ್ಪ್ ಮಂಡಳಿಗೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಸೋಮವಾರದಿಂದ ಚಳಿಗಾಲದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ವಕ್ಪ್ ತಿದ್ದುಪಡಿ ಮಸೂದೆ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ವಕ್ಪ್ ಕುರಿತಾಗಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo