ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್‌ಗೆ ಲೋಕಾಯುಕ್ತ ನೋಟಿಸ್
ವಸತಿ ಸಚಿವ ಜಮೀರ್ ಅಹಮ್ಮದ್ ಗೆ ಸಂಕಷ್ಟ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ.
ಡಿಸೆಂಬರ್ 3 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಡಿವೈಎಸ್‌ಪಿ ನೋಟಿಸ್ ನೀಡಿದ್ದಾರೆ.
ಇ.ಡಿ ದಾಳಿಯ ಬಳಿಕ ಜಮೀರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣ ದಾಖಲಾಗಿತ್ತು. ಅಕ್ರಮ ಗಳಿಕೆ ಸಂಬಂಧ ತನಿಖೆಗೆ ಇ.ಡಿ ಸೂಚಿಸಿತ್ತು. ಕಳೆದೆರಡು ವರ್ಷದಿಂದ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಈ ಹಿಂದೆ ದಾಖಲೆ ಸಲ್ಲಿಸಲು ನೋಟಿಸ್ ನೀಡಲಾಗಿತ್ತು. ಈಗ ಹಾಜರಾಗಿ ಹೇಳಿಕೆ ದಾಖಲಿಸಲು ನೋಟಿಸ್ ನೀಡಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ