Slider

ನ.27ರಿಂದ ಡಿ.12ರವರೆಗೆ ಕುಕ್ಕೆ ಸುಬ್ರಹ್ಮಣ್ಯ ಜಾತ್ರೋತ್ಸವ

Udupifirst-udupinews


 ಕುಕ್ಕೆ ಸುಬ್ರಹ್ಮಣ್ಯಮಹತೋಭಾರ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವ ಶಿಷ್ಟ ಸಂಪ್ರದಾಯ ಪ್ರಕಾರ ಕ್ರೋಧಿ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿಯಿಂದ ಮಾರ್ಗಶಿರ ಶುದ್ಧ ದ್ವಾದಶಿ ತನಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನೆರವೇರಲಿದೆ.

ನಾಗಾರಾಧನೆಯ ಪುಣ್ಯ ತಾಣದಲ್ಲಿ ಈ ಬಾರಿ ನ.27 ರಿಂದ ಡಿ.12ರ ತನಕ ಚಂಪಾಷಷ್ಠಿ - ಮಹೋತ್ಸವ ನಡೆಯಲಿದೆ. ಡಿ.7ರಂದು ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ಜರುಗಲಿದೆ.ನ.26ರಂದು ಮೂಲ ಮೃತ್ತಿಕಾ ಪ್ರಸಾದ ತೆಗೆಯಲಾಗುವುದು. ನ.27ರಂದು ಕೊಪ್ಪರಿಗೆ ಏರುವುದರ ಮೂಲಕ ಜಾತ್ರೆ ಆರಂಭವಾಗಲಿದೆ. ಆ ದಿನ ರಾತ್ರಿ ಶೇಷ ವಾಹನಯುಕ್ತ ಬಂಡಿ ಉತ್ಸವ ನಡೆಯಲಿದೆ.

ನ.28 ಮತ್ತು 29ರಂದು ಶೇಷ ವಾಹನಯುಕ್ತ ಬಂಡಿ ಉತ್ಸವ, ನ.30ರಂದು ಲಕ್ಷದೀಪೋತ್ಸವ ನಡೆಯಲಿದೆ. ಡಿ.1ರಂದು ಶೇಷವಾಹನೋತ್ಸವ, ಡಿ.2ರಂದು ಅಶ್ವವಾಹನೋತ್ಸವ, ಡಿ.3ರಂದು ಮಯೂರ ವಾಹನೋತ್ಸವ ನಡೆಯಲಿದೆ.ಡಿ.4ರಂದು ಶೇಷವಾಹನೋತ್ಸವ, ಡಿ.5ರಂದು ಚೌತಿ ಹೂವಿನ ತೇರಿನ ಉತ್ಸವ, ಡಿ.6ರಂದು ಮಾರ್ಗಶಿರ ಶುದ್ಧ ಪಂಚಮಿ ದಿನ ಶೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ ನೆರವೇರಲಿದೆ. ಡಿ.7ರಂದು ಮಾರ್ಗಶಿರ ಶುದ್ಧ ಷಷ್ಠಿ ಬೆಳಗ್ಗೆ ಚಂಪಾಷಷ್ಠಿ ಮಹಾರಥೋತ್ಸವ ನಡೆಯಲಿದೆ.ಡಿ.8ರಂದು ಅವಭ್ರತೋತ್ಸವ ಮತ್ತು ನೌಕವಿಹಾರ, ಡಿ.12ರಂದು ಕೊಪ್ಪರಿಗೆ ಇಳಿಯುವುದರ ಮೂಲಕ ಜಾತ್ರೋತ್ಸವ ಸಮಾಪನಗೊಳ್ಳಲಿದೆ. ಈ ದಿನ ರಾತ್ರಿ ನೀರಿನಲ್ಲಿ ಬಂಡಿ ಉತ್ಸವ ನೆರವೇರಲಿದೆ. ಅಲ್ಲದೆ ಪುರುಷರಾಯ, ಹೊಸಳಿಗಮ್ಮ ಹಾಗೂ ಪರಿವಾರ . ದೈವಗಳ ನಡಾವಳಿ ನಡೆಯಲಿದೆ.




0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo