ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರೂಪಗೊಂಡ ಫೆಂಗಲ್ ಚಂಡಮಾರುತ ತಮಿಳುನಾಡಿನಲ್ಲಿ ದೊಡ್ಡ ಅವಾಂತರ ಸೃಷ್ಟಿಸಿದೆ. ಇದೀಗ 'ಫೆಂಗಲ್'ಕರ್ನಾಟಕದತ್ತ ಆಗಮಿಸುತ್ತಿದೆ. ಕೆಲವೇ ಗಂಟೆಗಳಲ್ಲಿ ರಾಜ್ಯಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಮಳೆ ಅರ್ಭಟಿಸಲಿದೆ.
ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ಸೇರಿದಂತೆ ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಮೈಸೂರು, ಚಾಮರಾಜನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಕೋಲಾರ ಜಿಲ್ಲೆಗಳಲ್ಲೂ ಸಾಧಾರಣದಿಂದ ಅಧಿಕ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದ್ದು ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಫೆಂಗಲ್ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಗೋಚರಿಸಲಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 1ರಿಂದ ವರಣನ ಅರ್ಭಟ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ