Slider

ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಕೃಷ್ಣ ನಾಯ್ಕ ಬಂಧನ

Udupinews

 






ಕಾರ್ಕಳ: ನಕಲಿ ಪರಶುರಾಮ ಮೂರ್ತಿ ಪ್ರಕರಣ: ಆರೋಪಿ ಕೃಷ್ಣ ನಾಯ್ಕ ಬಂಧನ


ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ ಕೋರ್ಟ್‌ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ್ದರು.

ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಗುರುವಾರ ಜಾಮೀನು ತಿರಸ್ಕರಿಸಿತ್ತು. ಹೀಗಾಗಿ ಕೃಷ್ಣ ನಾಯ್ಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜಾಮೀನು ತಿರಸ್ಕಾರಗೊಂಡಿದ್ದರಿಂದ ಶಿಲ್ಪಿ ಕೃಷ್ಣ ನಾಯ್ಕ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಕೇರಳದ ಕ್ಯಾಲಿಕಟ್‌ನಲ್ಲಿ ತಲೆಮರೆಸಿಕೊಂಡಿದ್ದ ಅವರನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣ ನಾಯ್ಕ್ 'ಕೃಷ್ ಆರ್ಟ್ ವರ್ಲ್ಡ್' ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದರು. ಅನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ಆರೋಪಿಸಿ ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವವರು ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.










0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo