ಉಡುಪಿ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರದ ವತಿಯಿಂದ ಶನಿವಾರ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ಕಾರ್ಯದರ್ಶಿ ಮಾಣಿಕ್ಯ ಭಟ್, ಜಿಲ್ಲಾ ಸಂಚಾಲಕ ಕಾರ್ತಿಕ್ ಎಂ., ಮಂಗಳೂರು ವಿಭಾಗ ಸಂಚಾಲಕ ಗಣೇಶ್ ಪೂಜಾರಿ ಮಾತನಾಡಿದರು. ಬಳಿಕ ಈ ಕುರಿತ ಮನವಿಯನ್ನು ತಹಶೀಲ್ದಾರರ ಮೂಲಕ ರಾಜ್ಯ ಸರಕಾರಕ್ಕೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಾಮಾಜಿಕ ಜಾಲತಾಣ ಸಹ ಸಂಚಾಲಕ ಶ್ರೀವತ್ಸ ಡಿ.ಗಾಂವ್ಸ್‌ಕರ್, ಪ್ರಾಂತ ಕಾರ್ಯಕಾರಿಣಿ ಸದಸ್ಯ ಸಂಹಿತಾ ಕೆ., ನಗರ ಸಹ ಕಾರ್ಯದರ್ಶಿ ಶಿವನ್ ಮತ್ತು ಪ್ರಮುಖರಾದ ಕಿಶೋರ್, ನವೀನ್, ಅಭಿಲಾಷ್, ಮನೀಶ್, ರಕ್ಷಿತಾ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ