Slider

ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ವತಿಯಿಂದ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ರವರಿಗೆ ಗೌರವಾರ್ಪಣೆ...!!

Udupi

 


ಉಡುಪಿ: ಜಿಲ್ಲಾ ಹೋಟೆಲ್ ಮಾಲಕರ ಸಂಘ (ರಿ.), ಉಡುಪಿ ಜಿಲ್ಲಾಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶ್ರೀ ರಮೇಶ್ ಕಾಂಚನ್ ಅವರನ್ನು ತಾ. 10.12.2024ರಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಭೇಟಿಯಾಗಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘದ ಸದಸ್ಯರು ಹೋಟೆಲ್ ನಡೆಸುವ ಬಗ್ಗೆ ತಾವು ಅನುಭವಿಸುತ್ತಿರುವ ಸಮಸ್ಯೆಗಳನ್ನು ರಮೇಶ್ ಕಾಂಚನ್ ಅವರಲ್ಲಿ ಚರ್ಚೆ ನಡೆಸಿದರು.

CLICK HERE SHOP NOW

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಹೋಟೆಲ್ ಮಾಲಕರ ಸಂಘ (ರಿ.), ಉಡುಪಿ ಜಿಲ್ಲೆ ಇದರ ಉಪಾಧ್ಯಕ್ಷರಾದ ಲಕ್ಷ್ಮಣ್ ಜಿ ನಾಯಕ್, ಎಮ್ ವಿಠ್ಠಲ್ ಪೈ, ಹರೀಶ್ ಹೆಗ್ಡೆ, ಕಾರ್ಯದರ್ಶಿ ಕೆ ನಾಗೇಶ್ ಭಟ್ ಹಾಗೂ ಸದಸ್ಯರಾದ ರವಿ ಕುಮಾರ್, ತಲ್ಲೂರು ಶಿವಪ್ರಸಾದ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಗೋಪಾಲ್ ಬಂಗೇರ, ಗಿರೀಶ್ ಶೇರಿಗಾರ್, ಸುದರ್ಶನ್ ತಂತ್ರಿ, ಸಂಘದ ವ್ಯವಸ್ಥಾಪಕರಾದ ಬಿ ಅಶೋಕ್ ಪೈ ಹಾಗೂ ಮಧುಕರ್ ಮುದ್ರಾಡಿ ಉಪಸ್ಥಿತರಿದ್ದರು.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo