Slider

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

Udupi

 


ಭಾರತದ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್ನ ಹಿರಿಯ ಮುತ್ಸದಿ ಮನಮೋಹನ್ ಸಿಂಗ್ (92) ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಚಿಕಿತ್ಸೆ ಫಲಿಸದೇ ಕೊನೆಯುಸಿರೆದಿದ್ದಾರೆ.

ಗುರುವಾರ ಸಾಯಂಕಾಲ ಅವರಿಗೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಾಗ ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಇದೀಗ ಮಾಜಿ ಪ್ರಧಾನಿಗಳು ನಿಧನರಾಗಿದ್ದಾರೆ ಎಂದು ರಾಬರ್ಟ್‌ ವಾದ್ರಾ ಹಾಗೂ NSUI ಟ್ವೀಟ್‌ (ಎಕ್ಸ್‌) ಮಾಡುವ ಮೂಲಕ ಅಧಿಕೃತವಾಗಿ ತಿಳಿಸಲಾಗಿದೆ.

ಯುಪಿಎ ಅವಧಿಯಲ್ಲಿ ಸತತ ಎರಡು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಅವರನ್ನು ಕಳೆದುಕೊಂಡಿರುವ ಕಾಂಗ್ರೆಸ್ಗೆ ಹಿರಿಯ ಕೊಂಡಿಯೊಂದು ಕಳಚಿದ ನೋವು ಆವರಿಸಿದೆ.

ಮನಮೋಹನ್ ಸಿಂಗ್ ಅವರು 2004 ರಿಂದ 2014ರವರೆಗೆ UPA-1 ಮತ್ತು UPA-2 ಅವಧಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಮನ್‌ಮೋಹನ್‌ ಸಿಂಗ ಅಲಂಕರಿಸಿದ್ದರು.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo