ಸಿಂಗಾಪುರದ ಆತಿಥ್ಯದಲ್ಲಿ ನಡೆದ ವಿಶ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ್ದಾರೆ. ಹಾಲಿ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಗುಕೇಶ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
18 ವರ್ಷದ ಗ್ರ್ಯಾಂಡ್ ಮಾಸ್ಟರ್ ಗುಕೇಶ್ ಮತ್ತು 32 ವರ್ಷ ವಯಸ್ಸಿನ ಹಾಲಿ ಚಾಂಪಿಯನ್ ಲಿರೆನ್ ನಡುವೆ ನಡೆದ 13 ಪಂದ್ಯಗಳು ಡ್ರಾ ಆಗಿದ್ದವು. ಆ ಮೂಲಕ ಇಬ್ಬರೂ ತಲಾ 6.5 ಅಂಕಗಳೊಂದಿಗೆ ಸಮಬಲ ಸಾಧಿಸಿದ್ದರು. 14ನೇ ಗೇಮ್ನಲ್ಲಿ ಗೆಲುವು ಸಾಧಿಸುವ ಮೂಲಕ ಭಾರತದ 18 ವರ್ಷದ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ವಿಶ್ವನಾಥನ್ ಆನಂದ್ ನಂತರ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯನೆನಿಸಿಕೊಂಡಿದ್ದಾರೆ. ಇದಲ್ಲದೆ ಕೇವಲ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ಧಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ