Slider

ಉಡುಪಿ: ವಿಷದ ಹಾವು ಕಡಿತ: ಕೃಷಿಕ ಮೃತ್ಯು

Udupi

 


ಉಡುಪಿ: ನಗರದ ಕೆಮ್ಮಣ್ಣು ಸಮೀಪ ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕ ರೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಸಾವನ್ನಪ್ಪಿದ ದುರ್ದೈವಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ನಿವಾಸಿ ದಿ.ಬೂಧ ಪೂಜಾರಿಯವರ ಮಗ ಕೃಷಿಕ ಸುಂದರ ಪೂಜಾರಿ ಎಂದು ತಿಳಿದು ಬಂದಿದೆ.

CLICK HERE SHOP NOW

ಸುಂದರ ಪೂಜಾರಿ ಶನಿವಾರ ಸಂಜೆ ತೋಟದಲ್ಲಿ ಕೃಷಿ ಚಟುವಟಿಕೆ ನಿರತರಾಗಿದ್ದಾಗ ಇವರಿಗೆ ವಿಷದ ಹಾವು ಕಚ್ಚಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡ ಇವರು, ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ತಿಳಿಯಲಾಗಿದೆ.

ಕೃಷಿ ಕಾರ್ಯಗಳಲ್ಲಿ ಮತ್ತು ಕೃಷಿ ಸಂಘಟನೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದ ಇವರು ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo