ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೆ 1 ಹೊಟೇಲ್ ಜಂಕ್ಷನ್ ಬಳಿ ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಬೈಕ್ ಸವಾರ ಕಡಿಯಾಳಿ ನಿವಾಸಿ ಸುರೇಶ್ ತೀವ್ರ ಗಾಯಗೊಂಡಿದ್ದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಕಾಪು ಕಡೆಗೆ ಬರುತ್ತಿದ್ದ ಬೈಕ್ ಗೆ , ಅದೇ ದಿಕ್ಕಿನಲ್ಲಿ ಬರುತ್ತಿದ್ದ ಕೇರಳ ನೋಂದಾವಣೆಯ ಕಾರು ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ತೀವ್ರ ಗಾಯಗೊಂಡ ಗಾಯಾಳುವನ್ನು ಆಪದ್ಭಾಂಧವ ಸೂರಿ ಶೆಟ್ಟಿ ನೇತೃತ್ವದಲ್ಲಿ ಅಂಬುಲೆನ್ಸ್ ಚಾಲಕ ನಾಗರಾಜ್ ಕಾಪು ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸಂದರ್ಭ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ