ಉಡುಪಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಬಂಧನ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಡಿಯಾಳಿಯ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದರು.ಪೊಲೀಸರು ರಾಜ್ಯ ಕಾಂಗ್ರೆಸ್ ನಾಯಕರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹರಾಜಕತೆ ಸೃಷ್ಟಿಯಾಗಿದೆ. ವಿಧಾನಸಭಾ ಕಲಾಪದಲ್ಲಿ ಚರ್ಚೆಗಳು ಸಹಜವಾಗಿ ನಡೆಯುತ್ತವೆ. ಕೆಲವೊಮ್ಮೆ ವಿಕೋಪಕ್ಕೆ ತಿರುಗುತ್ತೆ, ಕೆಲವೊಂದು ಬಾರಿ ಶಾಂತಿಯುತ ಚರ್ಚೆ ನಡೆಯುತ್ತೆ.
ಅಂತಹದ್ದೆ ಒಂದು ಘಟನೆ ನಿನ್ನೆ ನಡೆದಿದೆ. ಯಾವುದೇ ಸಂದರ್ಭದಲ್ಲಿ ಕೂಡ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಮಾನಿಸುವ ಶಬ್ಧವನ್ನು ಸಿಟಿ ರವಿ ಅವರು ಬಳಕೆ ಮಾಡಿಲ್ಲ. ಸಿಟಿ ರವಿ ಅವರ ಬಂಧನ ದುರುದ್ಧೇಶಪೂರ್ವಕವಾಗಿದೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ನಾಯಕರಾದ ಕಿರಣ್ ಕುಮಾರ್ ಬೈಲೂರು, ಶ್ರೀನಿಧಿ ಹೆಗ್ಡೆ, ದಿನಕರ ಶೆಟ್ಟಿ ಹೆರ್ಗ, ಶ್ರೀಶ ನಾಯಕ್ ಪೆರ್ಣಂಕಿಲ, ಶ್ಯಾಮಲಾ ಕುಂದರ್, ಶಿಲ್ಪಾ ಸುವರ್ಣ, ಶ್ರೀಕಾಂತ್ ನಾಯಕ್ ಅಲೆವೂರು, ವಿಜಯಕುಮಾರ್ ಕೊಡವೂರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ