ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ. ಈ ಜಾಮೀನು ಅರ್ಜಿಯ ವಾದ, ಪ್ರತಿವಾದ ಆಲಿಸಿದ್ದಂತ ನ್ಯಾಯಾಲಯವು, ತೀರ್ಪು ಇಂದಿಗೆ ಕಾಯ್ದಿರಿಸಿತ್ತು. ಇದೀಗ ನಟ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ.
CLICK HERE SHOP NOW
ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿರುವಂತ ನಟ ದರ್ಶನ್ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕ ಎಸ್ ಪಿಪಿ ಪ್ರಸನ್ನ ಕುಮಾರ್ ಹಾಗೂ ದರ್ಶನ್ ಪರವಾಗಿ ವಕೀಲ ಸಿ.ವಿ ನಾಗೇಶ್ ತಮ್ಮ ವಾದ ಪ್ರತಿವಾದವನ್ನು ಮಂಡಿಸಿದ್ದರು. ಈ ಬಳಿಕ ಕೋರ್ಟ್ ಇಂದಿಗೆ ಜಾಮೀನು ಅರ್ಜಿಯ ತೀರ್ಪು ಕಾಯ್ದರಿಸಿತ್ತು. ಇದೀಗ ಜಾಮೀನು ಮಂಜೂರು ಆಗಿದೆ.
ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ದರ್ಶನ್ ಆಯಂಡ್ ಗ್ಯಾಂಗ್ ಅಪಹರಿಸಿ ಆರ್.ಆರ್.ನಗರದ ಪಟ್ಟಣಗೆರೆ ಶೆಡ್‌ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ ಭೀರಕವಾಗಿ ಕೊಲೆ ಮಾಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿದ್ದರು, ಬಳಿಕ ಮಧ್ಯಂತರ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ