Slider

ಉದ್ಯಾವರ: ಯುವಕ ಆತ್ಮಹತ್ಯೆ..!

Udupi

 


ಉಡುಪಿ: ಯುವ ಕ್ರಿಕೆಟಿಗನೊಬ್ಬ ಮನೆಯಲ್ಲಿ ಯಾರು
ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಮೃತ ಯುವಕನನ್ನು ಉದ್ಯಾವರ ಕೇದಾರ್‌ ಬೊಳ್ಜೆ ನಿವಾಸಿ, ಯುವ ಕ್ರಿಕೆಟರ್‌ ಆದಿತ್ಯ (24) ಎಂದು ತಿಳಿಸಿದರು.

ಶನಿವಾರ ರಾತ್ರಿ ಪೆರಂಪಳ್ಳಿಯಲ್ಲಿ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ ತನ್ನ ತಂಡದೊಂದಿಗೆ ಭಾಗವಹಿಸಿದ್ದ. ಬಳಿಕ ರವಿವಾರ ಮುಂಜಾನೆ 3 ಗಂಟೆಗೆ ಮನೆಗೆ ಬಂದ ಬಳಿಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಇ ವೇಳೆ ಬೆಳಗ್ಗೆ 7.30ಕ್ಕೆ ಅಜ್ಜಿ ಬಾಗಿಲು ಬಡಿದಾಗ, ಬಾಗಿಲು ತೆರೆಯದೇ ಇದ್ದು ಕಿಟಕಿಯಿಂದ ಇಣುಕಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ತಂದೆ ತಾಯಿ ಇಲ್ಲದೆ ಅಜ್ಜಿ ಮತ್ತು ಸಹೋದರನ ಹತ್ತಿರ ಬೆಳೆದಿರುವ ಆದಿತ್ಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆತನ ಸಹೋದರ ಸಚಿನ್‌ ಅವರು ನೀಡಿರುವ ದೂರಿನಂತೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo