ಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ಭಟ್ಕಳ ತಾಲೂಕಿನ ಮಾಸ್ತಿ (31) ಎಂಬವರು ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.
ಅವರು ಕಳೆದ 5 ವರ್ಷದಿಂದ ಮಲ್ಪೆಯಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಡಿ. 3ರಂದು ರಾತ್ರಿ ವಿನೋದ ಅವರ ಮಾಲಕತ್ವದ ಶ್ರೀ ಸುಶೀಲ ಎಂಬ ಆಳಸಮುದ್ರ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಡಿ. 7ರಂದು ಬೆಳಗ್ಗೆ 4ರ ವೇಳಗೆ ಸಮುದ್ರದಲ್ಲಿ 15 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬಲೆ ಎಳೆಯುತ್ತಿರುವಾಗ ಆಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ