Slider


ಉಡುಪಿ: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ.

Udupi

 


ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಉದ್ಯಮದಾರರು, ನಗರಾಭಿವೃದ್ಧಿ ಇಲಾಖೆಯ ಸುತ್ತೋಲೆಯಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕವಾಗಿ ಪರವಾನಗಿ ಪಡೆಯುವುದು ಕಡ್ಡಾಯವಾಗಿದ್ದು, ಕೋಟ್ಪಾ ಕಾಯ್ದೆಯಂತೆ ನಿಗಧಿತ ಶುಲ್ಕ ಪಾವತಿಸಿಕೊಂಡು ಕಡ್ಡಾಯವಾಗಿ ಉದ್ಯಮ ಪರವಾನಿಗೆಯನ್ನು ಪಡೆದುಕೊಳ್ಳಬೇಕು.

ಸರಕಾರದ ಸುತ್ತೋಲೆಯಂತೆ ಶಾಲಾ ಕಾಲೇಜು, ದೇವಸ್ಥಾನ, ಆಸ್ಪತ್ರೆ ಹಾಗೂ ಸಂಸ್ಥೆಯಿಂದ 100 ಗಜ ಅಂತರದಲ್ಲಿ ಯಾರು ಕೂಡ ತಂಬಾಕು ಉತ್ಪನ್ನಗಳ ಮಾರಾಟವನ್ನು ಮಾಡುವಂತಿಲ್ಲ. ಒಂದುವೇಳೆ ಮಾರಾಟ ಮಾಡುತ್ತಿದ್ದಲ್ಲಿ ಪ್ರಕಟಣೆ ತಲುಪಿದ ತಕ್ಷಣವೇ ಸದ್ರಿ ಉದ್ಯಮವನ್ನು ಸದ್ರಿ ಸ್ಥಳದಲ್ಲಿ ಸ್ಥಗಿತಗೊಳಿಸಿ ಬೇರೆ ಕಡೆ ಸ್ಥಳಾಂತರಿಸಬೇಕು.

ಕೋಟ್ಪಾ ಕಾಯ್ದೆಯ ಸೆಕ್ಷನ್ 2,3,4, ರಲ್ಲಿ ಸೂಚಿಸಿರುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಹೋಟೇಲ್, ಬೇಕರಿ, ದಿನಸಿ ಅಂಗಡಿ, ಖಾದ್ಯ ಪದಾರ್ಥ ಮಾರಾಟ ಅಂಗಡಿಗಳಿಗೆ ಹಾಗೂ ಇತರ ಉದ್ಯಮದಾರರು ಕೋಟ್ಪಾ ಕಾಯ್ದೆಯ ಸೆಕ್ಷನ್ 5 ರಲ್ಲಿ ಸೂಚಿಸಿರುವಂತೆ ಧೂಮಪಾನ ಮತ್ತು ತಂಬಾಕು ಸೇವನೆ ಬಗ್ಗೆ ಸೂಚನಾ ಫಲಕವನ್ನು ಕಡ್ಡಾಯವಾಗಿ ಉದ್ಯಮದ ಸ್ಥಳದಲ್ಲಿ ಪ್ರದರ್ಶಿಸಬೇಕು.

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಹಾಗೂ ತಂಬಾಕಿನ ಇತರೇ ಉತ್ಪನ್ನಗಳ ಸೇವನೆ ಮತ್ತು ಯಾವುದೇ ರೀತಿಯ ಮಾದಕ ಪಾನೀಯ ಅಥವಾ ಮಾದಕ ವಸ್ತುಗಳ ಸೇವನೆಯನ್ನು ದ ಸಿಗರೇಟ್ಸ್ ಅಂಡ್ ಅಧರ್ ಟೊಬ್ಯಾಕೋ ಪ್ರಾಡಕ್ಟ್ಸ್ (ಪ್ರೋಹಿಬಿಷನ್ ಆಫ್ ಅಡ್ವರ್ಟೈಸ್‌ಮೆಂಟ್ ಅಂಡ್ ರೆಗ್ಯುಲೇಷನ್ ಆಫ್ ಟ್ರೇಡ್ ಅಂಡ್ ಕಾಮರ್ಸ್, ಪ್ರೊಡಕ್ಷನ್, ಸಪ್ಲೈ ಅಂಡ್ ಡಿಸ್ಟ್ರಿಬ್ಯುಷನ್) ಆಕ್ಟ್ 2003 (ಕೇಂದ್ರ ಅಧಿನಿಯಮ 34/2003) ರಲ್ಲಿ ಮತ್ತು ಕರ್ನಾಟಕ ರಾಜ್ಯ ನಾಗರೀಕ ಸೇವಾ (ನಡತೆ) ನಿಯಮಗಳು, 2021 ರ ನಿಯಮ-31 ರಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಈ ಬಗ್ಗೆ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ನಿಗಧಿತ ದಂಡ ಶುಲ್ಕ ವಿಧಿಸಿ ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ತಂಬಾಕು ಮಾರಾಟ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ಸಾರ್ವಜನಿಕರು Stop tobbacco app ನಲ್ಲಿ ಪೋಟೋ ಮತ್ತು ವಿಳಾಸ ಸಹಿತ ದೂರನ್ನು ದಾಖಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯತ್ ಆರೋಗ್ಯ ವಿಭಾಗವನ್ನು ಸಂಪರ್ಕಿಸಬಹುದಾಗಿದೆ ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo