Slider


ಬ್ರಹ್ಮಗಂಟು ಖ್ಯಾತಿಯ ಸೀರಿಯಲ್ ನಟಿ ಶೋಭಿತಾ ಆತ್ಮಹತ್ಯೆಗೆ ಶರಣು

Udupi

 


ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. ಮದುವೆ ಬಳಿಕ ಹೈದರಾಬಾದ್ ನಲ್ಲಿ ವಾಸವಾಗಿದ್ದ ಶೋಭಿತಾ, ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಡರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ನಟಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿರುವ ಪೋಷಕರು ಹೈದರಾಬಾದ್ ಗೆ ದೌಡಾಯಿಸಿದ್ದಾರೆ.

ಹಿಟ್ಲರ್ ಕಲ್ಯಾಣ, ನಿನ್ನಿಂದಲೇ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಶೋಭಿತಾ, ಸಿನಿಮಾಗಳಲ್ಲಿಯೂ ಅಭಿನಯಿಸಿದ್ದರು. ವಂದನಾ, ಅಟೆಂಪ್ಟ್ ಟು ಮರ್ಡರ್, ಜಾಕ್ ಪಾಟ್, ಶತಭಿಷ ಚಿತ್ರಗಳಲ್ಲಿ ಅಭಿನಯಿಸಿದ್ದರು

.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo