ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಏರಿ ಸರ್ವೀಸ್ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಂಗಳೂರು ಸಮೀಪ ಇರುವ ಸಹನಾ ಕನ್ವೆನ್ಶನ್ ಸೆಂಟರ್ ನಡೆದಿದೆ.
CLICK HERE SHOP NOW
ಲಾರಿಯು ಮಂಗಳೂರಿನ ಕಾಟಿಪಳ್ಳ ಸಮೀಪದ ಕುತ್ತೆತ್ತೂರು ಎಂಬಲ್ಲಿಂದ ಎಂಆರ್ ಪಿಎಲ್ ಕಂಪೆನಿಯಿಂದ ಲಕ್ಷಾಂತರ ರೂ. ಮೌಲ್ಯದ ಮ್ಯಾಂಗ್ಪೋಲ್ ಪಾಲಿಪ್ರೊಫೈಲೀನ್ ಎನ್ನುವ ಪ್ಲಾಸ್ಟಿಕ್ ಕಚ್ಚಾ ವಸ್ತುವನ್ನು ತುಂಬಿಕೊಂಡು ಮಹಾರಾಷ್ಟ್ರದ ಕಡೆಗೆ ಪ್ರಯಾಣಿಸುತ್ತಿತ್ತು.
ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಮಗುಚಿ ಬಿದ್ದ ಲಾರಿಯನ್ನು ಮೇಲೆತ್ತಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ