Slider


ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ

Udupi


 ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಸುಮಾರು ಎರಡು ವಾರಗಳ ನಂತರ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಗುರುವಾರ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಸಿಎಂಗಳು ಹಾಗೂ ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಎನ್‌ಡಿಎ ನಾಯಕರು ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.

CLICK HERE SHOP NOW

 ಬಾಲಿವುಡ್ ನಟರಾದ ಶಾರುಖ್ ಖಾನ್, ಸಲ್ಮಾನ್ ಖಾನ್, ರಣಬೀರ್ ಕಪೂರ್ ಮತ್ತು ರಣವೀರ್ ಸಿಂಗ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ ಪ್ರಮುಖ ಸೆಲೆಬ್ರಿಟಿಗಳು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ದೇವೇಂದ್ರ ಫಡ್ನವಿಸ್ ಅವರು ಇಂದು ಮುಖ್ಯಮಂತ್ರಿಯಾಗಿ ಮೂರನೇ ಬಾರಿ ಪ್ರಮಾಣವಚನ ಸ್ವೀಕರಿಸಿದರು. ಮೊದಲ ಬಾರಿಗೆ ಅಕ್ಟೋಬರ್ 2014 ರಿಂದ ನವೆಂಬರ್ 2019 ರವರೆಗೆ ಪೂರ್ಣ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ 44ನೇ ವಯಸ್ಸಿನಲ್ಲಿ ಸಿಎಂ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂಬ ಗೌರವಕ್ಕೆ ಪಾತ್ರರಾಗಿದ್ದರು. ಅವರ ಎರಡನೇ ಅವಧಿಯು ಅತ್ಯಂತ ಸಂಕ್ಷಿಪ್ತವಾಗಿತ್ತು. ಕೇವಲ ಐದು ದಿನಗಳ ಕಾಲ ಅಂದರೆ ನವೆಂಬರ್ 23 ರಿಂದ 28, 2019 ರವರೆಗೆ ಸಿಎಂ ಆಗಿದ್ದರು. ಅವಿಭಜಿತ ಶಿವಸೇನೆ, ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿದ್ದರಿಂದ ಸರ್ಕಾರ ಫಡ್ನವಿಸ್ ಸರ್ಕಾರ ಪತನವಾಗಿತ್ತು.


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo