Slider

ಅಲೆವೂರು-ಮಣಿಪಾಲ ರಸ್ತೆ: ಟಿಪ್ಪರ್‌- ಬೈಕ್‌ ನಡುವೆ ಢಿಕ್ಕಿ; ಓರ್ವ ಮೃತ್ಯು, ಮತ್ತೊಬ್ಬ ಗಂಭೀರ

Udupi

 


ಉಡುಪಿ: ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ ಬಳಿ ತಿರುವಿನಲ್ಲಿ ಮರಳು ಸಾಗಾಟದ ಟಿಪ್ಪರ್‌ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಬೈಕ್‌ ಸವಾರ ಕಾರವಾರ ಮೂಲದ ವ್ಯಕ್ತಿ ಮೃತಪಟ್ಟರೆ, ಸಹಸವಾರ ಹಿರಿಯಡ್ಕ ಪರಿಸರದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
CLICK HERE SHOP NOW

ಘಟನೆ ಶುಕ್ರವಾರ ರಾತ್ರಿ 9.30ರ ವೇಳೆಗೆ ಸಂಭವಿಸಿದ್ದು, ಗಾಯಾಳು ಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ವೇಳೆ ಓರ್ವ ವ್ಯಕ್ತಿ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. 

ಸ್ಥಳಕ್ಕೆ ಮಣಿಪಾಲ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo