ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚೀಕಟಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ 'ಪುಷ್ಪ 2' ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು.
ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸಿಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ