ಉಡುಪಿ: ಸಮುದ್ರ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಉಡುಪಿ ಜಿಲ್ಲೆಯ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಹೆಜಮಾಡಿಯ ಅಕ್ಷಯ್ ಮತ್ತು ಅಮನ್ ಎಂದು ಗುರುತಿಸಲಾಗಿದೆ. ಎಳ್ಳಾಮವಾಸ್ಯೆ ಪ್ರಯುಕ್ತ ಆರು ಮಂದಿ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದರು.
ಈ ವೇಳೆ ಸಮುದ್ರದಲೆಗಳ ಸೆಳೆತಕ್ಕೆ 6 ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದು, ಆ ಪೈಕಿ ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನುಳಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಅಮವಾಸ್ಯೆಯಂದೇ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ.
ಘಟನೆ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ