ವಿಧಾನ ಪರಿಷತ್ ಕಲಾಪ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.
ಕಲಾಪದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿರುದ್ದ ಸಿಟಿ ರವಿ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ಹಿನ್ನಲೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಮಧ್ಯಾಹ್ನ 1 ಗಂಟೆಗೆ ದೂರು ನೀಡಿದ್ದರು. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 75 ಮತ್ತು 79ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 'ಸಿ.ಟಿ. ರವಿ ಅವರು ತಮ್ಮ ಕಡೆಗೆ ನುಗ್ಗಿ ಬಂದು ಸುಮಾರು 10 ಬಾರಿ ಆ 'ಆಕ್ಷೇಪಾರ್ಹ' ಪದ ಬಳಸಿದ್ದಾರೆ. ಅಶ್ಲೀಲವಾಗಿ ಸನ್ನೆ ಕೂಡ ಮಾಡಿ, ಮಾನಭಂಗ ಮಾಡಿದ್ದಾರೆ' ಎಂದೂ ದೂರಿನಲ್ಲಿ ಬರೆಯಲಾಗಿದೆ.
ಇದೀಗ ಹಿರೇಬಾಗೇವಾಡಿ ಪೊಲೀಸರು ಸುವರ್ಣ ಸೌಧದಲ್ಲೇ ಧರಣಿ ಕುಳಿತಿದ್ದ ಸಿಟಿ ರವಿ ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಬಂದ ಪೊಲೀಸರು, ಜೀಪಿನಲ್ಲಿ ಹತ್ತಿಸಿ ಹಿರೇಬಾಗೇವಾಡಿ ಠಾಣೆಗೆ ಕರೆದೊಯ್ದರು
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ