Slider

ಕಾರ್ಕಳ: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ಸರ ಕಳವು ಮಾಡಿದ ಕಳ್ಳ

Udupi


ಕಾರ್ಕಳ : ಚಿನ್ನ ಖರೀದಿ ನೆಪದಲ್ಲಿ ಆಭರಣ ಅಂಗಡಿಗೆ ಬಂದ ಕಳ್ಳನೋರ್ವ ಮಹಿಳಾ ಸಿಬ್ಬಂದಿಯ ಕಣ್ಣೆದುರಿನಲ್ಲೇ ಚಿನ್ನದ ಕರಿಮಣಿ ಸರ ಎಗರಿಸಿಕೊಂಡು ಪರಾರಿಯಾದ ಘಟನೆ ಕಾರ್ಕಳ ನಗರದ ರಥಬೀದಿಯ ಎಸ್ ಜೆ‌ ಅರ್ಕೆಡ್ ಬಳಿ‌ ನಡೆದಿದೆ.

ಚಿನ್ನ ಖರೀದಿಗಾಗಿ ಗ್ರಾಹಕನ ಸೋಗಿನಲ್ಲಿ ಬಂದ ಕಳ್ಳನಿಗೆ ಮಹಿಳಾ ಸಿಬ್ಬಂದಿ ಆಭರಣಗಳನ್ನು ತೋರಿಸಲು ಮುಂದಾಗಿದ್ದಾರೆ. ಈ ವೇಳೆ ಕೈಗೆ ಸಿಕ್ಕ ಚಿನ್ನದ ಸರವನ್ನು ಎಳೆದುಕೊಂಡು ಕಳ್ಳ ಪರಾರಿಯಾಗಿದ್ದಾನೆ.

ಕಳವಾದ ಕರಿಮಣಿ ಸರ ಸುಮಾರು 30 ಗ್ರಾಂ ತೂಕದ ಚಿನ್ನದ್ದು ಎನ್ನಲಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರ್ಕಳ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸಿಸಿ ಟಿವಿ ಫೂಟೇಜ್ ಆಧರಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo