ಉಡುಪಿಯ ವಕೀಲ ರಾಜನ್ ಕುಮಾರ್ ಮೇಲಿನ ಹಲ್ಲೆ ಪ್ರಕರಣದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಉಡುಪಿ ವಕೀಲರ ಸಂಘದ ವತಿಯಿಂದ ಇಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಕರಾವಳಿ ಬೈಪಾಸ್ ಬಳಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ರಾಜನ್ ಕುಮಾರ್‌ಗೆ ಜೀಪಿನಲ್ಲಿ ಬಂದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದನು.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ ಯನ್ನು ಇನ್ನೂ ಬಂಧಿಸಿಲ್ಲ. ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಸ್ಪಿಡಾ.ಅರುಣ್ ಕುಮಾರ್, ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ರೊನಾಲ್ಡ್ ಪ್ರವೀಣ್, ನ್ಯಾಯವಾದಿಗಳಾದ ವಿಜಯ್ ಕುಮಾರ್ ಶೆಟ್ಟಿ, ಆರೂರು ಸುಖೇಶ್ ಶೆಟ್ಟಿ, ಆನಂದ ಮಡಿವಾಳ, ರಾಜೇಶ್, ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ನಾಗರಾಜ್, ಗಂಗಾಧರ್ ಎಚ್.ಎಂ., ಮುರಳಿ ಮೊದಲಾದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ